ವಿದ್ಯುತ್ ಶಾಕ್ ಹೊಡೆದು ಲೈನ್ ಮ್ಯಾನ್ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಕಡಬ ಮೆಸ್ಕಾಂ ಲೈನ್ ಮ್ಯಾನ್ ಬಾಗಲಕೋಟೆ ಮೂಲದ ದ್ಯಾಮಣ್ಣ ಮೃತಪಟ್ಟವರು. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!