August 10, 2026
Monday, August 10, 2026
spot_img

ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್ ವಿದ್ಯುತ್ ಸ್ಪರ್ಶಿಸಿ ದಾರುಣ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:


ಜಿಒಎಸ್ ಆಫ್ ( ಗ್ರೂಫ್ ಆಪರೇಟೆಡ್ ಸ್ವಿಚ್) ಮಾಡದೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿದ ಮೆಸ್ಕಾಂ ಲೈನ್ ಮೆನ್ ಓರ್ವ ವಿದ್ಯುತ್ ಆಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಣ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.


ಅಂಬಿಕಾರೋಡ್, ಪಿಲಾರುವಿನ ನಿವಾಸಿ ಶೇಖ್ ಝಮೀರ್ (49) ಮೃತ ಪಟ್ಟ ವ್ಯಕ್ತಿ.


ಉಚ್ಚಿಲ ನಯಾಪಟ್ಣದ ಟ್ರಾನ್ಸ್ ಪಾರ್ಮರ್ ನಲ್ಲಿ ದೋಷದ ಬಗ್ಗೆ ಮೆಸ್ಕಾಂಗೆ ದೂರು ಬಂದ ಹಿನ್ನಲೆಯಲ್ಲಿ ಶೇಖ್ ಝಮೀರ್ ಹಾಗೂ ಸಹೋದ್ಯೋಗಿ ಸಂಗಪ್ಪ ಎಂಬವರು ಇಂದು ಬೆಳಿಗ್ಗೆ ಸ್ಥಳಕ್ಕೆ ದುರಸ್ಥಿಗೆ ಹೋಗಿದ್ದ ವೇಳೆ ಘಟನೆ ಸಂಭವಿಸಿದೆ. ಜಿಒಎಸ್ ಆಫ್ ಆಗಿದೆಯೆಂದು ಗ್ರಹಿಸಿ ಟ್ರಾನ್ಸ್ ಫಾರ್ಮರ್ ಏರಿದ ಝಮೀರ್ ವಿದ್ಯುತ್ ಆಘಾತಕ್ಕೊಳಗಾಗಿ ಕೆಳಗೆಸೆಯಲ್ಪಟ್ಟಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಝಮೀರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಝಮೀರ್ ಪತ್ನಿ ಮತ್ತು ಓರ್ವ ಹೆಣ್ಣು ಮಗಳನ್ನ ಅಗಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !