ಹೊಸದಿಗಂತ ವರದಿ ಬನವಾಸಿ:
ವಿದ್ಯುತ್ ಕಂಬವೇರಿ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡ ಘಟನೆ ಬನವಾಸಿಯ ಅಜ್ಜರಣಿ ಬಳಿ ಭಾನುವಾರ ರಾತ್ರಿ ನಡೆದಿದೆ.
ಬನವಾಸಿ ಹೆಸ್ಕಾಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ಇಂದುಧರ ದೊಡ್ಮನಿ ಗಾಯಗೊಂಡವರು.
ಭಾನುವಾರ ರಾತ್ರಿ ಅಜ್ಜರಣಿ ಗ್ರಾಮದ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ
ವಿದ್ಯುತ್ ಪ್ರವಹಿಸಿ ಕಂಬದಿಂದ ಕೆಳಗೆ ಬಿದ್ದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ತಕ್ಷಣವೇ ಶಿರಸಿ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ.
ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.