ತೀರ್ಥಹಳ್ಳಿ ಬಳಿ ವಿದ್ಯುತ್ ಕಂಬದಿಂದ ಬಿದ್ದು ಲೈನ್ ಮೆನ್ ಸಾವು

ಹೊಸದಿಗಂತ ವರದಿ ,ಶಿವಮೊಗ್ಗ:

ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮೆನ್ ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಮೃತಪಟ್ಟವರನ್ನು ರವಿ ನಾಯಕ(37) ಎಂದು  ಗುರುತಿಸಲಾಗಿದೆ. ಇವರು ಹೆದ್ದೂರು ಬಳಿ ಕೆಲಸ ಮಾಡುತ್ತಿರುವಾಗ ಕಂಬದಿಂದ ಬಿದ್ದಿದ್ದು ಗಂಭೀರ ಗಾಯಗೊಂಡ ಇವರನ್ನು ಸ್ಥಳೀಯರು ಕಾರಿನಲ್ಲಿ ಕಟ್ಟೆಹಕ್ಕಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ನಂತರ  ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಸಿಗದ ಕಾರಣ ಕಾರಿನಲ್ಲಿ ತೀರ್ಥಹಳ್ಳಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ .
ಆಸ್ಪತ್ರೆ ಮತ್ತು ಆಂಬುಲೆನ್ಸ್ ಅವ್ಯವಸ್ಥೆಯಿಂದ ಸಾವು ಸಂಭವಿಸಿದೆ ಎಂದು ಕಟ್ಟೆಹಕ್ಕಲು ಗ್ರಾಮಸ್ಥರು ಆಸ್ಪತ್ರೆ ಮುಂದೆ ಧರಣಿ ಕುಳಿತಿದ್ದಾರೆ.
ಘಟನೆಯಲ್ಲಿ ಆಂಬುಲೆನ್ಸ್ ಇಲ್ಲದ ಕಾರಣ ರವಿ ಅವರು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಮೃತರಿಗೆ ಇಬ್ಬರು ಚಿಕ್ಕ ಮಕ್ಕಳಿದ್ದಾರೆ.
ಆಸ್ಪತ್ರೆಗೆ ಅಂಬುಲೆನ್ಸ್ ಬೇಕು ಮತ್ತು ಲೈನ್ ಮ್ಯಾನ್ ಅವರಿಗೆ ಸರ್ಕಾರ ತಕ್ಷಣ ಪರಿಹಾರ ಘೋಷಣೆ ಮಾಡಬೇಕು ಎಂದು  ಪಟ್ಟು ಹಿಡಿದು ಅಸ್ಪತ್ರೆ ಮುಂದೆ ಜನರು ಧರಣಿ
ಕುಳಿತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!