ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಕಲ್ಯಾಣದಲ್ಲಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಕಾಂಗ್ರೆಸ್ ಮುಖಂಡ ಲಿಂಗರಾಜ್ ಕಣ್ಣಿಯನ್ನು ಮಹಾರಾಷ್ಟ್ರ ಪೊಲೀಸರು ಇಂದು ಅರೆಸ್ಟ್ ಮಾಡಿದ್ದಾರೆ. ಇದೀಗ ಪ್ರಾಥಮಿಕ ಸದಸ್ಯತ್ವದಿಂದ ಲಿಂಗರಾಜ ಕಣ್ಣಿ ಉಚ್ಚಾಟನೆ ಮಾಡಿ ಕಲಬುರ್ಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಅದೇಶಿಸಿದ್ದಾರೆ.
ಕಲ್ಬುರ್ಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಕಣ್ಣಿಯನ್ನು ಉಚ್ಚಾಟನೆ ಮಾಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ್ ಆದೇಶ ಹೊರಡಿಸಿದ್ದಾರೆ.
ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಕಾಂಗ್ರೆಸ್ ಮುಖಂಡ ಲಿಂಗರಾಜ್ ಮಹಾರಾಷ್ಟ್ರದ ಠಾಣೆ ನಗರದಲ್ಲಿ ಪೊಲೀಸರು ಇಂದು ಅರೆಸ್ಟ್ ಮಾಡಿದ್ದರು. ಅಲ್ಲದೇ ಬಂಧಿತ ಆರೋಪಿ ಕಲ್ಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಆಪ್ತ ಎಂದು ತಿಳಿದುಬಂದಿದೆ.