Sunday, November 27, 2022

Latest Posts

ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಹೋರಾಟ ನಿಂತಿಲ್ಲ: ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ನಿಂತಿಲ್ಲ. ಬೂದಿ ಮುಚ್ಚಿದ ಕೆಂಡದಂತಿದ್ದು, ಯಾವಾಗ ಹೊರಗೆ ಬರಲಿದೆ ಎಂಬುದನ್ನು ಕಾದು ನೋಡಬೇಕು ಎಂದು‌ ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಒಳಪಂಗಡದ ಜಾತಿಯವರು ಮೀಸಲಾತಿಗಾಗಿ ಹೋರಾಟ ಮಾಡ್ತಿದ್ದಾರೆ. ಈ ಸಂದರ್ಭ ಪ್ರತ್ಯೇಕ ಧರ್ಮದ ಹೋರಾಟ ಸೂಕ್ತ ಅಲ್ಲ. ಎಲ್ಲಾ ಒಂದು ಹಂತಕ್ಕೆ ಬಂದ ಬಳಿಕ ಮತ್ತೆ ಸೈದ್ಧಾಂತಿಕ, ಕಾನೂನಾತ್ಮಕವಾಗಿ ಪ್ರತಿಪಾದನೆ ಮಾಡಿ ಹೋರಾಟ ಮಾಡಲಾಗುತ್ತದೆ. ಜಾಗತಿಕ ಲಿಂಗಾಯತ ಮಹಾಸಭಾ ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡುತ್ತಿದೆ ಎಂದರು.

ಲಿಂಗಾಯತ ಧರ್ಮದಲ್ಲಿ 108 ಒಳಜಾತಿಗಳಿವೆ. ಮೀಸಲಾತಿ ಕೇಳುವುದರಲ್ಲಿ ಯಾವುದೇ ತಪ್ಪು ಇಲ್ಲ. ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಲಾಗುತ್ತದೆ. ಯಾವುದೇ ರಾಜಕೀಯ ಲಾಭಕ್ಕಾಗಿ ಧರ್ಮ ಬಳಸಿಕೊಳ್ಳಬಾರದು ಎಂದು ಸ್ವಾಮೀಜಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!