Thursday, August 11, 2022

Latest Posts

ಲಿಂಗಾಯತರು ಕೇವಲ ಬಿಜೆಪಿ ಸ್ವತ್ತಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಕಲಬುರಗಿ:

ಲಿಂಗಾಯತರು ಕೇವಲ ಬಿಜೆಪಿಯ ಸ್ವತ್ತಲ್ಲ, ಕಾಂಗ್ರೆಸ್​ನಲ್ಲಿಯೂ ಲಿಂಗಾಯತರಿದ್ದಾರೆ. ಅನೇಕ ಜನ ಲಿಂಗಾಯತ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಲಿಂಗಾಯತ ನಾಯಕರು ಪಕ್ಷಕ್ಕೆ ಬರಲು ಸಿದ್ಧರಿದ್ದು, ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಳ್ಳುವ ವಿಚಾರವಾಗಿ ಎಂ.ಬಿ ಪಾಟೀಲ್, ಎಸ್.ಆರ್ ಪಾಟೀಲ್, ಈಶ್ವರ್ ಖಂಡ್ರೆ ಚರ್ಚೆ ನಡೆಸುತ್ತಿದ್ದಾರೆ ಎಂದರು.
ಲಿಂಗಾಯತರು ತಮ್ಮ ಸ್ವತ್ತು ಎನ್ನುವ ಹಾಗೆ ಬಿಜೆಪಿಯವರು ವರ್ತಿಸುತ್ತಿದ್ದಾರೆ ಎಂದರು.
ಸಿಎಂ ಸ್ಥಾನಕ್ಕೆ ಕಾಂಗ್ರೆಸ್​ನಲ್ಲಿ ಮ್ಯೂಜಿಕಲ್ ಚೇರ್ ಸ್ಪರ್ಧೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ ಬಿಜೆಪಿ ಅಧ್ಯಕ್ಷ ಕಟೀಲ್​ಗೆ ತಿರುಗೇಟು ನೀಡಿದ ಡಿಕೆಶಿ,  ಸಿಎಂ ಹುದ್ದೆ ಕಾದಾಟ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿಲ್ಲ. ಅದು ಬಿಜೆಪಿಯಲ್ಲಿಯೇ ನಡೆದಿದೆ ಎಂದು ನುಡಿದರು.
ಸದ್ಯಕ್ಕೆ ಚುನಾವಣೆ ಹತ್ತಿರವಿಲ್ಲ, ಕೊರೊನಾದಿಂದ ರಾಜಕೀಯ ಸಭೆಗಳಿಗೆ ಅವಕಾಶ ಕೊಟ್ಟಿಲ್ಲ. ಹೀಗಾಗಿ ಜನರ ಬಳಿ ಹೋಗಿ ಅವರ ಸಮಸ್ಯೆ ಆಲಿಸುತ್ತಿದ್ದೇವೆ ಎಂದರು. ಬಂಜಾರ ಸಮಾಜ, ಕರಾವಳಿ ಮಿನುಗಾರರು ಸೇರಿದಂತೆ ಹಿಂದುಳಿದ ಸಮುದಾಯಗಳ ಬಗ್ಗೆ ಮುಂದಿನ ದಿನಗಳಲ್ಲಿ ಮಾಡಬೇಕಾದ ಅಭಿವೃದ್ಧಿ ಕಾರ್ಯವೈಖರಿ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss