ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ (LeT) ಮತ್ತು ಹಿಜ್ಬುಲ್ ಮುಜಾಹಿದ್ದೀನ್(HM) ಸಂಘಟನೆ ಜೊತೆಗೆ ನಂಟು ಹೊಂದಿದ್ದ ಪ್ರಮುಖ ಆರೋಪಿಯನ್ನು ಎನ್‌ಐಎ ವಶಕ್ಕೆ ಪಡೆದಿದ್ದಾರೆ .
ನಾರ್ಕೋ-ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಯ್ಯದ್ ಸಲೀಂ ಜಹಾಂಗೀರ್ ಅಂದ್ರಾಬಿ ಅಲಿಯಾಸ್ ಸಲೀಂ ಅಂದ್ರಾಬಿ ಕಳೆದ ನಾಲ್ಕೈದು ವರ್ಷಗಳಿಂದ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಲ್ಲಿ ಕೇಸ್ ದಾಖಲಿಸಲಾಗಿದೆ.
ಗ್ರೇಟರ್ ಕಾಶ್ಮೀರ ವೆಬ್‌ಸೈಟ್‌ನ ಪ್ರಕಾರ, ಜೂನ್ 26, 2020 ರಂದು ಸ್ಥಳೀಯ ಪೊಲೀಸರಿಂದ ಪ್ರಕರಣದ ತನಿಖೆಯನ್ನು ಕೇಂದ್ರೀಯ ಸಂಸ್ಥೆ ವಹಿಸಿಕೊಂಡಿತ್ತು. ಎನ್‌ಐಎ ತನ್ನ ತನಿಖೆಯ ಸಮಯದಲ್ಲಿ, ಭಾನುವಾರ ಬಂಧಿತ ಆರೋಪಿ ಅಂದ್ರಾಬಿ ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಇತರ ಭಾಗಗಳಲ್ಲಿ ಮಾದಕ ದ್ರವ್ಯಗಳನ್ನು ಸಂಗ್ರಹಿಸಲು ಮತ್ತು ಮಾರಾಟ ಮಾಡುವ ಜಾಲದಲ್ಲಿ ಭಾಗಿಯಾಗಿದ್ದನು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಮೋಮಿನ್ ಪೀರ್ ಎಂಬಾತನನ್ನು ಬಂಧಿಸಿದ ಹಂದ್ವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆತನನ್ನು ಬಂಧಿಸಿದ ಪೊಲೀಸರು ₹20 ಲಕ್ಷ ನಗದು ಹಾಗೂ 2 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ, NIA ಪ್ರಕರಣದಲ್ಲಿ ಒಟ್ಟು 15 ಆರೋಪಿಗಳನ್ನು ಚಾರ್ಜ್ ಶೀಟ್ ಮಾಡಿದೆ. ಈ ಚಾರ್ಜ್ ಶೀಟ್‌ಗಳನ್ನು ಡಿಸೆಂಬರ್ 2020 ಮತ್ತು ಫೆಬ್ರವರಿ 2023 ರ ನಡುವೆ ಸಲ್ಲಿಸಲಾಗಿದೆ.