ಐಸಿಸ್‌ ಜೊತೆ ನಂಟು: ಅಲಿಗಢ ಮುಸ್ಲಿಂ ವಿವಿ ವಿದ್ಯಾರ್ಥಿ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ತಂಡದ ಅಧಿಕಾರಿಗಳು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಮತ್ತೋರ್ವ ವಿದ್ಯಾರ್ಥಿಯನ್ನು ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ ಮತ್ತು ದೇಶಾದ್ಯಂತ ದಾಳಿ ನಡೆಸಲು ಯೋಜಿಸಿದ್ದಾರೆ ಎಂಬ ಶಂಕೆಯ ಮೇಲೆ ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಲಿಗಢದ ಮುಸ್ಲಿಂ ವಿಶ್ವವಿದ್ಯಾನಿಲಯದ ಹತ್ತು ವಿದ್ಯಾರ್ಥಿಗಳನ್ನು ಐಸಿಸ್ ಜೊತೆ ನಂಟು ಹೊಂದಿರುವ ಶಂಕೆಯ ಮೇಲೆ ಬಂಧಿಸಲಾಗಿದೆ.

ಬಂಧಿತ ಆರೋಪಿ 24 ವರ್ಷದ ಫೈಜಾನ್ ಆಗಿದ್ದು, ಆತ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಸಮಾಜ ಕಲ್ಯಾಣ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದಾನೆ. ಅಲಿಗಢದಲ್ಲಿ ಭಯೋತ್ಪಾದಕ ಸಂಘಟನೆ ಐಸಿಸ್ ನ ಘಟಕ ಸ್ಥಾಪಿಸಿ ಯುವಕರನ್ನು ಸೆಳೆಯಲು ಯೋಜನೆ ರೂಪಿಸಿದ್ದ ಎಂದು ಗೊತ್ತಾಗಿದೆ.

ಬಂಧಿತ ಆರೋಪಿಗಳ ವಿಚಾರಣೆ ವೇಳೆ ಫೈಜಾನ್ ಬಗ್ಗೆ ಮಾಹಿತಿ ಬಹಿರಂಗವಾಗಿದ್ದು, ಫೈಜಾನ್ ಬಗ್ಗೆ ಮಾಹಿತಿ ನೀಡಿದವರಿಗೆ 25 ಸಾವಿರ ರೂ. ಪೊಲೀಸರು ಬಹುಮಾನ ಘೋಷಿಸಿದ್ದಾರೆ. ಇದೀಗ ಎಟಿಎಸ್ ಅಧಿಕಾರಿಗಳು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!