ವೋಟರ್ ಐಡಿಗೆ ಆಧಾರ್ ನಂಬರ್​​ ಲಿಂಕ್ ಕಡ್ಡಾಯವಲ್ಲ: ಚುನಾವಣಾ ಆಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮತದಾರರು ವೋಟರ್ ಐಡಿಗೆ ಆಧಾರ್ ನಂಬರ್​​ ಲಿಂಕ್ ಮಾಡಿಸುವುದು ಕಡ್ಡಾಯವಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಚುನಾವಣೆ ಆಯೋಗವುಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂ ಪ್ರೇರಿತರಾಗಿ ಆಧಾರ್ ಅಥವಾ ಇತರೆ ನಿಗದಿತ ದಾಖಲೆಗಳ ಮೂಲಕವೂ ದೃಢೀಕರಿಸಿ ಜೋಡಣೆ ಮಾಡಬಹುದಾಗಿದೆ ಎಂದು ತಿಳಿಸಿದೆ.
ಮಾಧ್ಯಮಗಳಲ್ಲಿ ವರದಿಯಾದ ವರದಿಗಳನ್ನು ಉಲ್ಲೇಖಿಸಿ, ಫಾರ್ಮ್ -6 ಬಿ ಯಲ್ಲಿ ಆಧಾರ್ ಸಲ್ಲಿಸುವುದು ಸ್ವಯಂಪ್ರೇರಿತವಾಗಿದೆ ಎಂಬುದನ್ನು ಗಮನಿಸಬಹುದು. ಆಧಾರ್ ಸಲ್ಲಿಸದ ಕಾರಣ ಮತದಾರರ ಪಟ್ಟಿಯಲ್ಲಿನ ಯಾವುದೇ ನಮೂದನ್ನು ಅಳಿಸಲಾಗುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.
ಆಗಸ್ಟ್​ 9 ರಂದು ರಾಜ್ಯದ ಎಲ್ಲ ಮತದಾರರು ತಮ್ಮ ಮತದಾನ ಗುರುತಿನ ಚೀಟಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರ್​ನ್ನು ಲಿಂಕ್​ ಮಾಡಿಕೊಳ್ಳಬೇಕೆಂದು ಚುನಾವಣಾ ಆಯೋಗ ಸೂಚಿಸಿದೆ ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿತ್ತು.
ಸುತ್ತೋಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ರಾಜ್ಯದ ಎಲ್ಲಾ ಮತದಾರರ ಗುರುತಿನ ಚೀಟಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು, ಎಲ್ಲಾ ಮತದಾರರು ತಮ್ಮ ಹಾಗೂ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಮತ್ತು ನಿಮ್ಮ ಸ್ನೇಹಿತರ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಕೂಡಲೇ ಆಧಾರ್ ನಂಬರನ್ನು ಲಿಂಕ್ ಮಾಡಿಕೊಳ್ಳಲು ಕೋರಿದೆ ಎಂದು ಕಂದಾಯ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿತ್ತು.
ಪ್ರಸ್ತುತ ಮಾಧ್ಯಮ ಪ್ರಕಟಣೆ ಹೊರಡಿಸಿದ ರಾಜ್ಯ ಚುನಾವಣಾ ಆಯೋಗ ಮತದಾರರು ವೋಟರ್ ಐಡಿಗೆ ಆಧಾರ್ ನಂಬರ್​​ ಲಿಂಕ್ ಮಾಡಿಸುವುದು ಕಡ್ಡಾಯವಲ್ಲ ಎಂದು ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!