ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಂಜೆ 4 ಗಂಟೆಯಿಂದ ಆರು ದಿನಗಳ ಕಾಲ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ವಿಧಾನ ಪರಿಷತ್ ಚುನಾವಣೆ, ಲೋಕಸಭಾ ಚುನಾವಣಾ ಮತಎಣಿಕೆ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಜೂನ್ 1 ರಿಂದ ಜೂನ್ 6 ರವರೆಗೆ ಆಲ್ಕೊಹಾಲ್ಯುಕ್ತ ಪಾನೀಯಗಳ ಮಾರಾಟವನ್ನು ನಿಷೇಧಿಸಲಾಗಿದೆ. ಜೂನ್ 2 ಹಾಗೂ ಜೂನ್ 4 ಹಾಗೂ ಜೂನ್ 6ರಂದು ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜೂನ್ 1 ಮತ್ತು 3 ರಂದು ಮಧ್ಯ ಮಾರಾಟವನ್ನು ಭಾಗಶಃ ಮುಚ್ಚಲಾಗುತ್ತದೆ.