ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ ಇದೀಗ ಕಡೆಯ ಹಂತಕ್ಕೆ ಬಂದಿದ್ದು, ಸಂಭ್ರಮದಿಂದ ಗಣಪನನ್ನು ವಿಸರ್ಜನೆ ಮಾಡಲಾಗುತ್ತಿದೆ.
ಗಣೇಶ ವಿಸರ್ಜನೆ ವೇಳೆ ಕೆಲವೊಮ್ಮೆ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆ ಇದ್ದು, ರಾಜಧಾನಿ ಬೆಂಗಳೂರಿನ ಹಲವು ಕಡೆ ಮದ್ಯ ನಿಷೇಧ ಮಾಡಲಾಗಿದೆ.
ಬೆಂಗಳೂರಿನ ಕೇಂದ್ರ, ಉತ್ತರ, ಪೂರ್ವ ಮತ್ತು ಈಶಾನ್ಯ ವಿಭಾಗದ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ಸೆ.೨೧ರಿಂದ ೩೦ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಮದ್ಯದಂಗಡಿ, ಬಾರ್ ಆಂಡ್ ರೆಸ್ಟೋರೆಂಟ್ ಹಾಗೂ ವೈನ್ಸ್ ಮಾರಾಟಕ್ಕೂ ಬ್ರೇಕ್ ಬಿದ್ದಿದೆ. ಜೆಸಿ ನಗರ, ಸಂಜಯ ನಗರ, ಹೆಬ್ಬಾಳ ಹಾಗೂ ಆರ್‌ಟಿ ನಗರದಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟದ ಮೇಲೆ ನಿಷೇಧ ಹೇರಲಾಗಿದೆ.