ನಾಳೆಯಿಂದ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ!

ಹೊಸದಿಗಂತ ವರದಿ,ಮಡಿಕೇರಿ:

ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜು. 21 ರ ಸಂಜೆ 5 ಗಂಟೆಯಿಂದ 23 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯ ಈ ಕೆಳಗಿನ ಸ್ಥಳಗಳಲ್ಲಿ ಮದ್ಯ ಮಾರಾಟ ನೀಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು, ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡು ಮತ್ತು ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಈ ದಿನಗಳಂದು ಎಲ್ಲಾ ವಿಧದ ಮದ್ಯ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿರುವುದಾಗಿ ಅವರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!