ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇ.10ಕ್ಕೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ಆಯೋಕ ಪಾರದರ್ಶಕ ಪ್ರಕ್ರಿಯೆಗಳಿಗೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಚುನಾವಣೆ ನಡೆಯುವ ದಿನ ಹಾಗೂ ಮತ ಎಣಿಕೆ ಮಾಡುವ ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಜತೆಗೆ ಮತದಾನ ದಿನದಂದು ತುರ್ತು ಸೇವೆ ಮತ್ತು ಚುನಾವಣೆಗೆ ನಿಯೋಜನೆಗೊಂಡ ಸಿಬ್ಬಂದಿ ಹೊರತುಪಡಿಸಿ ಎಲ್ಲ ಕಾರ್ಮಿಕ ವರ್ಗ, ಖಾಸಗಿ ಸಿಬ್ಬಂದಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.
ಮೇ.10 ಹಾಗೂ 13 ರಂದು 25ಗಂಟೆಗಳು ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧವಾಗಿದೆ.