Thursday, June 1, 2023

Latest Posts

ಮದ್ಯದಂಗಡಿ ಬಂದ್: ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಅಪಾರ ನಷ್ಟ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ 2 ದಿನ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿತ್ತು. ಈ ವೇಳೆ ರಾಜ್ಯದ ಬಾರ್, ರೆಸ್ಟೋರೆಂಟ್, ಎಂಆರ್‌ಪಿ ಅಂಗಡಿಗಳನ್ನು ಮುಚ್ಚಲಾಗಿತ್ತು. ಹೀಗಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ದೊಡ್ಡ ನಷ್ಟ ಉಂಟಾಗಿದೆ.

ರಾಜ್ಯದಲ್ಲಿ ಒಟ್ಟು 12,500 ಬಾರ್, ವೈನ್ ಶಾಪ್, ಎಂಆರ್‌ಪಿ ಅಂಗಡಿಗಳಿದ್ದು, ಪ್ರತಿ ದಿನ ಅಬಕಾರಿ ಇಲಾಖೆಯಿಂದ ರಾಜ್ಯ ಸರ್ಕಾರಕ್ಕೆ 80 ಕೋಟಿ ರೂ.ಯಿಂದ 90 ಕೋಟಿ ರೂ. ವರೆಗೆ ಆದಾಯ ಬರುತ್ತಿತ್ತು.
ಕರ್ನಾಟಕದಲ್ಲಿ ಸತತ ಎರಡು ದಿನ ಮದ್ಯದಂಗಡಿಗಳು ಬಂದ್ ಮಾಡಿದ್ದಕ್ಕೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 150 ಕೋಟಿ ರೂಪಾಯಿಗೂ ಹೆಚ್ಚು ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಇನ್ನು ಮೇ 13ರಂದು ಮತ ಎಣಿಕೆ ಮತ್ತು ಫಲಿತಾಂಶ ಹಿನ್ನೆಲೆ ಮೇ 12ರ ಮಧ್ಯರಾತ್ರಿಯಿಂದ ಮತ್ತೆ ಒಂದು ದಿನ ರಾಜ್ಯಾದ್ಯಂತ ಮದ್ಯದಂಗಡಿಗಳು ಕ್ಲೋಸ್ ಆಗಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!