Thursday, February 2, 2023

Latest Posts

ರಸ್ತೆ ಮಧ್ಯದಲ್ಲೇ ಪಲ್ಟಿಯಾದ ಮದ್ಯ ಸಾಗಾಟದ ವಾಹನ: ಬಾಟಲಿಗಳು ಚೆಲ್ಲಾಪಿಲ್ಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮದ್ಯ ಸಾಗಾಟ ಮಾಡುತ್ತಿದ್ದ ವಾಹನವೊಂದು ಟೈರ್‌ ಸಿಡಿದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಸನಾಪುರ ಗ್ರಾಮದ ಬಳಿ ನಡೆದಿದೆ.

ಈ ವಾಹನ ಕಲಬುರಗಿಯಿಂದ ಜೇವರ್ಗಿ ಪಟ್ಟಣದತ್ತ ತೆರಳುತ್ತಿತ್ತು.‌ ಈ ಸಂದರ್ಭ ವಾಹನ ಟೈರ್‌ ಸಿಡಿದಿದ್ದು, ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಚಾಲಕ, ಕ್ಲೀನರ್‌ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಾಹನ ಪಲ್ಟಿಯಾಗುತ್ತಿದ್ದಂತೆಯೇ ಅಪಾರ ಪ್ರಮಾಣದ ಮದ್ಯದ ಬಾಟಲಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದ್ದು, ಅಪಾರ ಪ್ರಮಾಣದ ಮದ್ಯ ನಾಶವಾಗಿದೆ.

ಈ ಬಗ್ಗೆ ಸದ್ಯ ಕಲಬುರಗಿ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!