2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ 2-3 ದಿನಗಳಲ್ಲಿ ಪ್ರಕಟವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಕ್ಷದ ಸ್ಥಳೀಯ ಮುಖಂಡರ ಅಭಿಪ್ರಾಯವನ್ನು ಆಧರಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು.

2-3 ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನಾಳೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!