ಧನುರ್ಮಾಸದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿ.ಕೆ ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದ್ದು, ಧನುರ್ಮಾಸದ ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ , ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ತಯಾರು ಮಾಡಲಾಗುತ್ತಿದ್ದು, ಧನುರ್ಮಾಸದ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೋಲಾರದಲ್ಲಿ ಇಂದು ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ ಕಾರ್ಯಕರ್ತರ ಒತ್ತಡದಿಂದ ಸಿದ್ದರಾಮಯ್ಯ ತನ್ನ ಸ್ಪರ್ಧೆ ಬಗ್ಗೆ ಘೋಷಣೆ ಮಾಡಿರಬಹುದು, ಅವರು ಏನು ಮಾತನಾಡಿದ್ದಾರೆ ಎಂದು ತಿಳಿದುಕೊಂಡು ಮಾತನಾಡುವೆ, ಏನಾಗಿದೆ ಎಂದು ತಿಳಿದುಕೊಂಡು ಹೇಳುವೆ ಎಂದಷ್ಟೇ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!