ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿಯ ಪಟ್ಟಿ ಬಿಡುಗಡೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚಿಸಿ 39 ಸದಸ್ಯರುಳ್ಳ ಪಟ್ಟಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಡುಗಡೆ ಮಾಡಿದ್ದಾರೆ. ಸಮಿತಿಯಲ್ಲಿ ಕರ್ನಾಟಕದಿಂದ ಖರ್ಗೆ , ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಎಂಎಲ್​​ಸಿ ಬಿ.ಕೆ.ಹರಿಪ್ರಸಾದ್ ಅವರಿಗೂ ಸ್ಥಾನ ನೀಡಲಾಗಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಇಂತಿದೆ:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಸಮಿತಿಯಲ್ಲಿದ್ದಾರೆ.

ಇವರಲ್ಲದೆ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಸಚಿನ್ ಪೈಲೆಟ್, ದಿಗ್ವಿಜಯ್ ಸಿಂಗ್, ಶಶಿ ತರೂರ್, ಆನಂದ ಶರ್ಮಾ, ಜೈರಾಮ್ ರಮೇಶ್, ಅಧೀರ್ ರಂಜನ್ ಚೌಧರಿ, ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಒಟ್ಟು 39 ನಾಯಕರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್​ಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!