‘ಕೈ’ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕಡಪದಿಂದ ಕಣಕ್ಕಿಳಿದ ಶರ್ಮಿಳಾ!

ಹೊಸದಿಗಂತ ಡಿಜಿಟಲ್ ಡೆಸ್ಕ್‌: 

ಆಂಧ್ರಪ್ರದೇಶದ ವಿಧಾನ ಸಭೆ ಚುನಾವಣೆಗೆ ಪಕ್ಷಗಳು ಸಜ್ಜಾಗುತ್ತಿದ್ದು, ಕಾಂಗ್ರೆಸ್ ಸಮಿತಿಯು (ಎಪಿಸಿಸಿ) 114 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇಂದು (ಮಂಗಳವಾರ) ಪ್ರಕಟಿಸಿದೆ.

ಇತ್ತ ಈ ಸಮಯ ಕಾಂಗ್ರೆಸ್‌ ಹೈಕಮಾಂಡ್ ವಿವಿಧ ರಾಜ್ಯಗಳ 17 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಎಪಿಸಿಸಿ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಅವರು ಕಡಪ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಸಿಪಿಐ, ಸಿಪಿಐ (ಎಂ) ಜತೆಗೆ ಮೈತ್ರಿ ಮಾಡಿಕೊಂಡಿದೆ. 25 ಲೋಕಸಭಾ ಕ್ಷೇತ್ರಗಳು ಹಾಗೂ 175 ವಿಧಾನಸಭಾ ಕ್ಷೇತ್ರಗಳಿಗೆ ಮೇ 13ರಂದು ಏಕಕಾಲಕ್ಕೆ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ರಾಜ್ಯದಲ್ಲಿ ಆಡಳಿತರೂಢ ವೈಎಸ್‌ಆರ್‌ಸಿಪಿ ಸ್ಪತಂತ್ರವಾಗಿ ಸ್ಪರ್ಧಿಸುತ್ತಿದೆ. ಉಳಿದಂತೆ ತೆಲುಗು ದೇಶಂ (ಟಿಡಿಪಿ), ಜನಸೇನಾ, ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಎಲ್ಲಾ ಪಕ್ಷಗಳು ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!