ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಮಡಿಕೇರಿ:
ಪಟ್ಟಿಘಾಟ್ ಮೀಸಲು ಅರಣ್ಯಕ್ಕೆ ಅಕ್ರಮ ಪ್ರವೇಶ ಮಾಡಿ ಬೇಟೆಯಾಡಿದ ಆರೋಪದಡಿ ನಾಲ್ವರು ನುರಿತ ಬೇಟೆಗಾರರನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಮಡಿಕೇರಿ ತಾಲೂಕಿನ ಭಾಗಮಂಡಲ ವಲಯ ಅರಣ್ಯಾಧಿಕಾರಿ ಹೆಚ್.ಜಿ. ದೇವರಾಜು ಮಾರ್ಗದರ್ಶನದಲ್ಲಿ ಖಚಿತ ಸುಳಿವಿನ ಮೇರೆಗೆ ದಾಳಿ ಮಾಡಿದ ಸಿಬ್ಬಂದಿಗಳು ಆರೋಪಿಗಳಾದ ಕೆ.ಬಿ. ಉಮೇಶ್, ಪಿ.ಬಿ ರಾಮಕೃಷ್ಣ, ಕೆ.ಬಿ. ರವೀಂದ್ರ, ಕೆ.ಬಿ. ಸುರೇಶ್ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಳಿವಿನಂಚಿನಲ್ಲಿರುವ ಕೆಂದಳಿಲು ಮತ್ತು ಕಬ್ಬೆಕ್ಕು ಪ್ರಾಣಿಗಳ ಮಾಂಸ ಹಾಗೂ ಸುಬ್ರಮಣ್ಯ ಎಂಬವರಿಹೆ ಸೇರಿದ್ದೆನ್ನಲಾದ ಪರವಾನಗಿ ರಹಿತ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ವಿವಿಧ ಸೆಕ್ಷನ್ ಪ್ರಕಾರ ಮೊಕದ್ದಮೆ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಬಂಧಿತನಾಗಿರುವ ರಾಮಕೃಷ್ಣ ಈ ಹಿಂದೆ ಸಿಂಗಳಿಕ ಬೇಟೆಯಾಡಿದ ಪ್ರಕರಣದಡಿ ಸಿಲುಕಿ ನ್ಯಾಯಾಂಗ ಬಂಧನದಲ್ಲಿದ್ದು, ಹೊರಬಂದಿರುವುದಾಗಿ ಹೇಳಲಾಗಿದೆ.