ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಿಥಿಯಂ-ಐಯಾನ್ ಬ್ಯಾಟರಿಯ ಪ್ರವರ್ತಕ ಜಾನ್ ಬಿ ಗುಡ್ನೊಫ್ ನಿಧನರಾಗಿದ್ದಾರೆ. ಗುಡ್ನೊಫ್ ಅವರು ತಮ್ಮ 100 ನೇ ವಯಸ್ಸಿನಲ್ಲಿ ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ.
ಟೆಕ್ಸಾಸ್ ವಿಶ್ವವಿದ್ಯಾಲಯವು ಅವರ ಮರಣದ ವಿಷಯವನ್ನು ಖಚಿತಪಡಿಸಿದೆ.
ವಿದೇಶಿ ಮಾಧ್ಯಮಗಳ ಪ್ರಕಾರ, ಲಿಥಿಯಂ-ಐಯಾನ್ ಬ್ಯಾಟರಿಯ ರಚನೆಗಾಗಿ ಗುಡ್ನೊಫ್ ಅವರಿಗೆ ರಸಾಯನಶಾಸ್ತ್ರದಲ್ಲಿ ಹಂಚಿಕೆಯ ನೊಬೆಲ್ ಪ್ರಶಸ್ತಿ ನೀಡಲಾಗಿತ್ತು.
2019ನೇ ಸಾಲಿನ ರಾಸಾಯನಿಕ ಶಾಸ್ತ್ರದಲ್ಲಿ ಮೂವರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಈ ಪೈಕಿ ಜಾನ್ ಬಿ ಗುಡ್ನೊಫ್ ಕೂಡ ಅತ್ಯುನ್ನತ್ತ ಪ್ರಶಸ್ತಿಗೆ ಭಾಜನರಾಗಿದ್ದರು.
ಲಿಥಿಯಂ-ಐಯಾನ್ ಬ್ಯಾಟರಿಗಳ ಅಭಿವೃದ್ಧಿಗಾಗಿ ಅವರು ನಡೆಸಿರುವ ಸಂಶೋಧನೆಗೆ ಈ ಸಾಲಿನ ಪ್ರತಿಷ್ಠಿತ ಗೌರವ ಸಿಕ್ಕಿತ್ತು. ಸ್ಮಾರ್ಟ್ಫೋನ್ಗಳಲ್ಲಿ ಅವಿಭಾಜ್ಯ ಅಂಗವಾಗಿರುವ ಬ್ಯಾಟರಿ ತಂತ್ರಜ್ಞಾನದ ಬಗ್ಗೆ ಅವರು ಮಾಡಿರುವ ಸಂಶೋಧನೆಗೆ ಎಲ್ಲೆಡೆಯಿಂದ ಮೆಚ್ಚುಗೆಗೆ ಪಾತ್ರವಾಗಿತ್ತು.
ಪ್ರಮುಖವಾದ ವಿಷಯವೆಂದರೆ ತಮ್ಮ 97ನೇ ವಯಸ್ಸಿನಲ್ಲಿ ಜಾನ್ ಬಿ ಗುಡ್ನೊಫ್ ಅವರಿಗೆ ನೊಬೆಲ್ ಪ್ರಶಸ್ತಿ ಲಭಿಸಿದ್ದು, ಅವರು ಅತ್ಯಂತ ಹಿರಿಯ ವಿಜ್ಞಾನಿಯಾಗಿದ್ದಾರೆ.