ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿಗೆ ಭಾನುವಾರ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ನಮ್ಮ ಮೆಟ್ರೋ ಯೆಲ್ಲೋ ಲೈನ್ ಲೋಕಾರ್ಪಣೆ ಮಾಡಿದ್ದರು. ಮತ್ತೊಂದೆಡೆ ಅದೇ ಸಮಯದಲ್ಲಿ, ಐದು ವರ್ಷ ವಯಸ್ಸಿನ ಪುಟ್ಟ ಬಾಲಕಿಯೊಬ್ಬಳು ಬೆಂಗಳೂರಿನ ಹದಗೆಟ್ಟ ರಸ್ತೆಗಳ ಬಗ್ಗೆ ಹಾಗೂ ಸಂಚಾರದಟ್ಟಣೆ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆದಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಬೆಂಗಳೂರಿನ ನಿವಾಸಿ ಅಭಿರೂಪ್ ಎಂಬವರ ಪುತ್ರಿ ಆರ್ಯ, ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದು, ನಗರದ ದೀರ್ಘಕಾಲದ ಸಂಚಾರ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿದ್ದಾಳೆ.
‘ನರೇಂದ್ರ ಮೋದಿ ಜೀ, ಬೆಂಗಳೂರಿನಲ್ಲಿ ವಿಪರೀತ ಟ್ರಾಫಿಕ್ ಇದ್ದು ನಾವು ಶಾಲೆ ಹಾಗೂ ಕಚೇರಿಗಳಿಗೆ ತಡವಾಗಿ ತಲುಪುತ್ತಿದ್ದೇವೆ. ರಸ್ತೆ ತುಂಬಾ ಕೆಟ್ಟದಾಗಿದೆ. ದಯಮಾಡಿ ಸಹಾಯ ಮಾಡಿ’ ಎಂದು ಮೋದಿಗೆ ಬರೆದ ಪತ್ರದಲ್ಲಿ ಬಾಲಕಿ ಆರ್ಯ ಉಲ್ಲೇಖಿಸಿದ್ದಾಳೆ.