ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿದ್ದ ಗೆಳತಿಯ ಮೇಲೆ ಅತ್ಯಾಚಾರ ಮಾಡಿ, ಬಳಿಕ 40-50 ತುಂಡುಗಳಾಗಿ ಕತ್ತರಿಸಿ ಬಿಸಾಡಿರುವ ಘಟನೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನ.8 ಜಾರ್ಖಂಡ್‌ಗೆ ಬಂದಿಳಿದಳು. ಮನೆಯಲ್ಲಿ ಹೆಂಡತಿಯಿದ್ದ ಕಾರಣ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಲು ಆರೋಪಿ ತಯಾರಿರಲಿಲ್ಲ. ಹಾಗಾಗಿ ಆಟೋರಿಕ್ಷಾದಲ್ಲಿ ಆಕೆಯನ್ನು ಖುಂಟಿಗೆ ಕರೆದೊಯ್ದು ಮನೆಯ ಸಮೀಪ ನಿಲ್ಲಿಸಿ, ತಾನು ಮರಳಿ ಬರುವುದಾಗಿ ತಿಳಿಸಿ ಮನೆ ಕಡೆಗೆ ಹೋಗಿದ್ದಾನೆ. ಮನೆಯಿಂದ ಮರಳುವಾಗ ಆಯುಧಗಳೊಂದಿಗೆ ಹಿಂದಿರುಗಿದ್ದಾನೆ. ಆಕೆಯ ಮೇಲೆ ಆತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಸಾಯಿಸಿದ್ದಾನೆ. ನಂತರ ದೇಹವನ್ನು 40 ರಿಂದ 50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಖುಂಟಿ ಪೊಲೀಸ್ ವರಿಷ್ಠಾಧಿಕಾರಿ ಅಮನ್ ಕುಮಾರ್ ಮಾಹಿತಿ ಪ್ರಕಾರ, ಆರೋಪಿ ತಮಿಳುನಾಡಿನ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕೋಳಿಯನ್ನು ಕತ್ತರಿಸುವುದರಲ್ಲಿ ನಿಪುಣರಾಗಿದ್ದ. ನ.24 ರಂದು ಜೋರ್ಡಾಗ್ ಗ್ರಾಮದ ಬಳಿ ಬೀದಿ ನಾಯಿಯ ಕಳೇಬರದೊಂದಿಗೆ ಕೈಯೊಂದು ಕಾಣಿಸಿಕೊಂಡಿದ್ದು, ನಂತರ ಪೊಲೀಸರ ಪರಿಶೀಲನೆಯ ಬಳಿಕ ಹಲವು ಭಾಗಗಳನ್ನು ಪತ್ತೆಹಚ್ಚಿದ್ದಾರೆ ಎಂದು ತಿಳಿಸಿದರು.