ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದಲ್ಲಿ ಸಾರ್ವಜನಿಕ ಸಾರಿಗೆ ಬಳಕೆದಾರರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮಹತ್ವದ ಯೋಜನೆ ರೂಪಿಸುತ್ತಿದೆ.
BMTC ಬಸ್‌ಗಳ ಲೈವ್ ಲೊಕೇಷನ್ Ola, Uber ಜತೆಗೆ ಇನ್ನೂ ಹಲವು ಆ್ಯಪ್ ಆಧಾರಿತ ಸಾರಿಗೆ ಸೇವೆಗಳಿಗೆ ಹಂಚಿಕೊಳ್ಳುವ ಕುರಿತು ಚಿಂತನೆ ನಡೆಯುತ್ತಿದೆ ಎಂದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
ಈ ಹೊಸ ಯೋಜನೆಯಿಂದ ಪ್ರಯಾಣಿಕರು ಕ್ಯಾಬ್ ಅಥವಾ ಆಟೋ ಬುಕ್ ಮಾಡೋವಾಗ ಸಮೀಪದಲ್ಲಿರುವ BMTC ಬಸ್‌ಗಳ ಸ್ಥಳವನ್ನು ಟ್ರ್ಯಾಕ್ ಮಾಡಬಹುದು.
ಇಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ BMTC ಅಧಿಕಾರಿಗಳಿಗೆ ಈ ವಿಷಯದ ಕುರಿತ ಸಾಧ್ಯತೆಯನ್ನು ಪರಿಶೀಲಿಸುವಂತೆ ಸೂಚಿಸಿದ್ದಾರೆ.
ಮುಖ್ಯವಾಗಿ ಮೆಟ್ರೋ, BMTC ಬಸ್, ಕ್ಯಾಬ್ ಹಾಗೂ ಆಟೋ ಸೇವೆಗಳಲ್ಲಿ ಪ್ರಯಾಣಿಸುವವರಿಗೆ ಈ ವ್ಯವಸ್ಥೆ ಹೆಚ್ಚು ಅನುಕೂಲವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.



