ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಕಾಂಗ್ರೆಸ್ ಸಮಾವೇಶದಲ್ಲಿ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಭಾರೀ ಕೈಗಾರಿಕೆಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ‘ನನ್ನನ್ನು ಕೆಣಕಬೇಡ ಶಿವಕುಮಾರ್, ಹುಷಾರು…’ ಎಂದು ಖಡಕ್ ಎಚ್ಚರಿಕೆಯನ್ನೂ ನೀಡಿದ್ದಾರೆ.
ನಾನು ಮುಖ್ಯಮಂತ್ರಿ ಆಗಿದ್ದಾಗ ಅಕ್ರಮ ನಡೆದಿದ್ದರೆ ದಾಖಲೆ ನೀಡಲಿ ಎಂದು ತಮ್ಮ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.
ಶುಕ್ರವಾರ ದೆಹಲಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ವ್ಯಕ್ತಿತ್ವ ಹೊಂದಿರುವ ವ್ಯಕ್ತಿನಾ? ಅವನಿಗೆ ನಾಲಿಗೆ ಇದೆಯೇ? ಅವನು ಮನುಷ್ಯನಾ? ಮೊದಲು ನೆಟ್ಟಗೆ ಬದುಕು, ನನ್ನನ್ನು ಕೆಣಕಬೇಡ ಶಿವಕುಮಾರ್, ಹುಷಾರ್…. ಎಂದು ಎಚ್ಚರಿಸಿದ್ದಾರೆ ಕುಮಾರಸ್ವಾಮಿ.
ನಿಮ್ಮ ಯೋಗ್ಯತೆ, ಹಣೆಬರಹ ನನಗೆ ಬಹಳ ಚೆನ್ನಾಗಿ ಗೊತ್ತಿದೆ. ನಿಮ್ಮ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ಬದುಕಲು ಕಷ್ಟವಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.