ಮೋದಿ ಸಂವಾದದಲ್ಲಿ ವರ್ಚುವಲ್ ಆಗಿ ಬೆಸೆದುಕೊಂಡ ಜಗನ್ನಾಥ ಭವನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕದ ಐವತ್ತು ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್‌ ಸಂವಾದ ನಡೆಸಿದರು. ಅಂತೆಯೇ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನೂರಾರು ಕಾರ್ಯಕರ್ತರು ಮೋದಿಯವರೊಂದಿಗಿನ ವರ್ಚುವಲ್‌ ಸಂವಾದವನ್ನು ಇಂದು ಎಲ್‍ಇಡಿ ಪರದೆಯಲ್ಲಿ ವೀಕ್ಷಿಸಲಾಯಿತು.

ಬೆಳಗ್ಗೆ 9.30ಕ್ಕೆ ರಾಜ್ಯದ ಎಲ್ಲ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ‘ನಮೋ ಆ್ಯಪ್’ ಮೂಲಕ ಸಂವಾದ ನಡೆಸಿದರು. ಈ ಕಾರ್ಯಕ್ರಮದ ಮೂಲಕ ಮೋದಿಯವರು ಸ್ಪೂರ್ತಿದಾಯಕ ಮಾತುಗಳನ್ನಾಡಿ, ಡಬಲ್ ಇಂಜಿನ್ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಕಾರ್ಯಕರ್ತರನ್ನು ಹುರಿದುಂಬಿಸಿದರು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌, ಕರ್ನಾಟಕ ಚುನಾವಣಾ ಉಸ್ತುವಾರಿ ಮತ್ತು ಕೇಂದ್ರ ಸಚಿವ ಧಮೇರ್ಂದ್ರ ಪ್ರಧಾನ್, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು. ಶೋಭಾ ಕರಂದ್ಲಾಜೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!