ಹೊಸದಿಗಂತ ಡಿಜಿಟಲ್ ಡೆಸ್ಕ್:
ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಆರಂಭವಾದ ವಾಂತಿ – ಭೇದಿ ಉಲ್ಬಣಗೊಂಡಿದೆ. ಒಂದೇ ದಿನ 41 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ಬೋರ್‌ವೆಲ್ ನೀರು ಕಲುಷಿತಗೊಂಡಿದ್ದು, ಇದನ್ನು ಸೇವಿಸಿದವರಿಗೆ ಈ ರೀತಿ ಆರೋಗ್ಯ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ.
ತೀವ್ರ ಅಸ್ವಸ್ಥರಾದ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ಮೂವರನ್ನು ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿತ್ರಾಣಗೊಂಡಿರುವ ಈರವ್ವ ಗಾಳಿಮಠ ಅವರನ್ನು ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ. ಇನ್ನಿಬ್ಬರು ಒಳರೋಗಿಗಳಾಗಿ ದಾಖಲಾಗಿದ್ದಾರೆ. ಉಳಿದವರು ಚಚಡಿ ಹಾಗೂ ಇಂಚಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.