ಬ್ರಿಟನ್‌ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ: ಅಭಿನಂದಿಸಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಿಷಿ ಸುನಕ್ ಅವರನ್ನು ಸೋಲಿಸಿ ಬಿಟ್ರನ್ ನ ಮೂರನೇ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾದ ಲಿಜ್ ಟ್ರಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿನಂದಿಸಿದ್ದಾರೆ.
ನಿಮ್ಮ ನಾಯಕತ್ವದಲ್ಲಿ, ಭಾರತ-ಯುಕೆ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂಬ ವಿಶ್ವಾಸವಿದೆ. ನಿಮ್ಮ ಹೊಸ ಪಾತ್ರ ಮತ್ತು ಜವಾಬ್ದಾರಿಗಳಿಗಾಗಿ ನಿಮಗೆ ಶುಭವಾಗಲಿ ಎಂದು ಹಾರೈಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಪ್ರಸ್ತುತ ವಿದೇಶಾಂಗ ಸಚಿವರಾಗಿರುವ ಟ್ರಸ್, ಕನ್ಸರ್ವೇಟಿವ್ ಪಕ್ಷದ ಸದಸ್ಯರ ಮತದಲ್ಲಿ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಅವರನ್ನು 81,326 ಮತಗಳಿಂದ 60,399 ಕ್ಕೆ ಗೆದಿದ್ದಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!