ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ಮೇದಕ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ ಮಂಗಳವಾರ ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿದ್ದು, ಇದನ್ನು ಸೇವಿಸಿದ 35 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ರಾಮಯಂಪೇಟೆಯ ಟಿಜಿ ಮಾಡೆಲ್ ಸ್ಕೂಲ್‌ನ ವಿದ್ಯಾರ್ಥಿಗಳು ತಿಂಡಿ ತಿಂದ ಬಳಿಕ ಅಸ್ವಸ್ಥರಾಗಿದ್ದರು. ವಾಂತಿ, ಬೇಧಿ ಕಾಣಿಸಿಕೊಂಡಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಿರ್ಲಕ್ಷ್ಯದ ಆರೋಪದ ಮೇಲೆ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ವಜಾಗೊಳಿಸಲಾಗಿದ್ದು, ಹಾಸ್ಟೆಲ್‌ನ ಉಸ್ತುವಾರಿ ಮತ್ತು ವಿಶೇಷ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮೇದಕ್ ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಕೂಡಲೇ ಸ್ಪಂದಿಸಿದ ಶಾಲಾ ಅಧಿಕಾರಿಗಳು ವೈದ್ಯಕೀಯ ನೆರವು ನೀಡಿ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಪ್ರಾಥಮಿಕ ವರದಿಗಳ ಪ್ರಕಾರ ಆಹಾರವನ್ನು ತಯಾರಿಸುವ ಸಮಯದಲ್ಲಿ ಹಲ್ಲಿ ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಹೇಳಲಾಗುತ್ತಿದೆ.