ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ: 36 ವಿದ್ಯಾರ್ಥಿಗಳು ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸರ್ಕಾರಿ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ಗುರುವಾರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುವ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ತಿಳಿಸಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಿತು.

ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. 36 ವಿದ್ಯಾರ್ಥಿಗಳು ಈಗ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಸದರ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

40 ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಸೇವಿಸಿದ್ದಾರೆ, ಅದರಲ್ಲಿ 36 ಮಕ್ಕಳು ಅಸ್ವಸ್ಥರಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!