ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ಜನಗಾಂವ್ ಜಿಲ್ಲೆಯ ದೇವರುಪ್ಪುಲಾ ಗ್ರಾಮದ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಹಲ್ಲಿಯ ಅವಶೇಷಗಳನ್ನು ಹೊಂದಿರುವ ಆಹಾರ ಸೇವಿಸಿದ ನಂತರ ಸುಮಾರು 12 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.
ಮೂಲಗಳ ಪ್ರಕಾರ, ರಾತ್ರಿ ಸೌತೆಕಾಯಿ ಚಟ್ನಿಯನ್ನು ಅವರಿಗೆ ನೀಡಲಾಗಿದ್ದು ಅದರಲ್ಲಿ ಹಲ್ಲಿಯ ಅವಶೇಷಗಳು ಕಂಡುಬಂದಿವೆ ಎನ್ನಲಾಗಿದೆ.
ವಿದ್ಯಾರ್ಥಿಗಳು ಅಸ್ವಸ್ಥರಾದ ತಕ್ಷಣ ಅವರನ್ನು ಚಿಕಿತ್ಸೆಗಾಗಿ ಜನಾಂವ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅವರೆಲ್ಲರ ಆರೋಗ್ಯವು ಸ್ಥಿರವಾಗಿದೆ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದ್ದು ಈ ಕುರಿತು ಹೆಚ್ಚಿನ ತನಿಖೆಗಳು ನಡೆಯುತ್ತಿವೆ.