ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಉಪ ಪ್ರಧಾನಿ ಮತ್ತು ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಹೀಗಾಗಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಯಿಂದ ಬಿಡುಗಡೆ ಮಾಡಲಾಗಿದೆ.
96 ವರ್ಷದ ಹಿರಿಯ ನಾಯಕನನ್ನು ಮೂತ್ರಶಾಸ್ತ್ರ, ಕಾರ್ಡಿಯಾಲಜಿ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ವಿಶೇಷತೆಗಳ ವೈದ್ಯರ ತಂಡವು ಟೆಸ್ಟ್ ಮಾಡಿತು.
ವಯೋಸಹಜ ಸಮಸ್ಯೆಗಳಿಂದಾಗಿ ಅಡ್ವಾಣಿ ಅವರನ್ನು ಬುಧವಾರ ರಾತ್ರಿ 10.30 ರ ಸುಮಾರಿಗೆ ಏಮ್ಸ್ ನ ಹಳೆಯ ಖಾಸಗಿ ವಾರ್ಡ್ ಗೆ ದಾಖಲಿಸಲಾಯಿತು.ಇದೀಗ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಏಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.