ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿರುವ ಎಲ್ ​ಕೆ ಅಡ್ವಾಣಿ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠೆಯ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್​​.ಕೆ.ಅಡ್ವಾಣಿ ಭಾಗವಹಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ.

ರಾಮ ಮಂದಿರ ಹೋರಾಟದ ರೂವಾರಿ ಆಗಿರುವ ಅಡ್ವಾಣಿ, ಅಯೋಧ್ಯೆಯ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ವಿಹೆಚ್​ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.

ಅಡ್ವಾಣಿ ಮತ್ತು ಮತ್ತೊಬ್ಬರು ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರ ವಯಸ್ಸು ಮತ್ತು ಆರೋಗ್ಯದ ಸ್ಥಿತಿಯನ್ನು ಪರಿಗಣಿಸಿ ಸಮಾರಂಭಕ್ಕೆ ಹಾಜರಾಗದಂತೆ ಮನವಿ ಮಾಡಲಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಈ ಹಿಂದೆ ಮಾಧ್ಯಮಗಳಿಗೆ ತಿಳಿಸಿದ್ದರು.

ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನಂತರದಲ್ಲಿ ಉಭಯ ನಾಯಕರ ಮನೆಗೆ ತೆರಳಿ ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿರುವ ಫೋಟೊಗಳು ಪ್ರಕಟಗೊಂಡಿದ್ದವು.

ಏತನ್ಮಧ್ಯೆ, ಅದ್ದೂರಿ ಸಮಾರಂಭಕ್ಕೆ ಅಯೋಧ್ಯೆಯಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ರಾಮಮಂದಿರಕ್ಕೆ ಈಗಾಗಲೇ 1,100 ಕೆಜಿ ತೂಕದ ದೀಪ, ಎಂಟು ಲೋಹಗಳಿಂದ ಮಾಡಿದ 2,100 ಕೆಜಿ ತೂಕದ ಗಂಟೆ ಸೇರಿದಂತೆ ಭಾರತ ಮತ್ತು ವಿದೇಶಗಳಿಂದ ವಿಶೇಷ ಕೊಡುಗೆಗಳನ್ನು ಕಳುಹಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!