ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ ಅತೀಕ್ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್‌ ಅವರು ಇನ್ನು ಮುಂದೆ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ.

ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯರ್ಶಿಯಾಗಿದ್ದ ರಜನೀಶ್‌ ಗೋಯಲ್‌ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್‌ 30ರಂದು ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್‌ ಗೋಯಲ್‌ ಅಧಿಕಾರ ವಹಿಸಿಕೊಳ್ಳಲಿದ್ಧಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!