Friday, August 19, 2022

Latest Posts

LKG, UKG ಮಕ್ಕಳಿಗೆ ಆನ್ ಲೈನ್ ಕ್ಲಾಸ್ ಮಾಡಿದರೆ ಎಚ್ಚರ! ಕಠಿಣ ಕ್ರಮಕ್ಕೆ ಆಗ್ರಹಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ನಿಂದಾಗಿ ಶಾಲಾ ಕಾಲೇಜಿನ ಮಕ್ಕಳಿಗೆ ಆನ್ ಲೈನ್ ಮೂಲಕ ಪಾಠ ಮಾಡುತ್ತಿದ್ದು, ಖಾಸಗಿ ಶಾಲೆಗಳು ಎಲ್ ಕೆಜಿ, ಯುಕೆಜಿ ಮಕ್ಕಳಿಗೂ ಆನ್ ಲೈನ್ ಶಿಕ್ಷಣ ನೀಡಲು ಮುಂದಾಗಿದ್ದು, ಅಂತವರ ವಿರುದ್ಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುಡುಗಿದ್ದಾರೆ.

ಲಾಕ್ ಡೌನ್ ನಿಂದಾಗಿ ಖಾಸಗಿ ಶಾಲಾ ಕಾಲೇಜುಗಳಲ್ಲಿ ಆನ್ ಲೈನ್ ತರಗತಿ ನಡೆಸುತ್ತಿದ್ದು, ಇದೀಗ LKG, UKG ಮಕ್ಕಳಿಗೂ ಆನ್ ಲೈನ್ ಶಿಕ್ಷಣ ನೀಡುತ್ತಿರುವುದು ಬೆಳಕಿಗೆ ಬಂದಿದ್ದು, ಅಂತವರ ವಿರುದ್ಧ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ LKG ಮತ್ತು UKG ಕಂದಗಳಿಗೂ ಆನ್ ಲೈನ್ ಶಿಕ್ಷಣ ಕೊಡುವ ಮನಸ್ಥಿತಿಗೆ ಏನೆನ್ನಬೇಕು? ಹಣದ ದುರಾಸೆಯಷ್ಟೇ! ಅವರಿಗೆಲ್ಲಾ ಶಿಕ್ಷಣ ಇಲಾಖೆಯ ಕ್ರಮ ಕಾದಿದೆ ಎಂದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!