Wednesday, August 17, 2022

Latest Posts

ಎಲ್‌ಕೆಜಿ, ಯುಕೆಜಿ ಆರಂಭದ ಕುರಿತು ಇನ್ನೂ ಆಲೋಚನೆ ಮಾಡಿಲ್ಲ: ಸಚಿವ ನಾಗೇಶ್

ಹೊಸದಿಗಂತ ವರದಿ,ಶಿವಮೊಗ್ಗ:

ಅಂಗನವಾಡಿಗಳನ್ನು ಎರಡು ದಿನಕ್ಕೊಮ್ಮೆ ನಡೆಸಲು ಸೂಚಿಸಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಇರುವ ಎಲ್‌ಕೆಜಿ-ಯುಕೆಜಿಯನ್ನು ಹಂತ ಹಂತವಾಗಿ ಆರಂಭಿಸಲಾಗುವುದು ಎಂದು ಶಿಕ್ಷಣ ಸ ಚಿವ ಬಿ.ಸಿ.ನಾಗೇಶ್ ತಿಳಿಸಿದರು.
ನಗರದ ಹೊರವಲಯದ ಮಲವಗೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ 1ರಿಂದ 5ನೇ ತರಗತಿ ಮಕ್ಕಳನ್ನು ಸ್ವಾಗತಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭದ ಬಗ್ಗೆ ಆಲೋಚನೆ ಮಾಡಿಲ್ಲ. ಸರ್ಕಾರಿ ಶಾಲೆಗಳಲ್ಲಿ ಆ ವ್ಯವಸ್ಥೆ ಇನ್ನೂ ಜಾರಿಗೊಂಡಿಲ್ಲ ಎಂದರು.
ಈಗಷ್ಟೇ 1ರಿಂದ 5ನೇ ರಗತಿ ಶಾಲೆಗಳು ಆರಂಭಗೊಂಡಿವೆ. ಹಾಗಾಗಿ ಪಠ್ಯ ಕಡಿತಗೊಳಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಅವಶ್ಯಕತೆ ಬಿದ್ದರೆ ಮುಂದಿನ ದಿನಗಳಲ್ಲಿ ಆ ಬಗ್ಗೆ ಆಲೋಚಿಸಲಾಗುವುದು. ಡಿಸೆಂಬರ್‌ನಲ್ಲಿ ಮತ್ತೊಮ್ಮೆ ಸಭೆ ನಡೆಸಿ ಪರೀಕ್ಷೆಗೆ ಪಠ್ಯ ಕಡಿತಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!