ಕಾರಿನಲ್ಲಿ ಅಕ್ರಮ ಗಾಂಜಾ ಸಾಗಾಟ : 32 ಲಕ್ಷ ಮೌಲ್ಯದ ಗಾಂಜಾ ವಶ

ದಿಗಂತ ವರದಿ ಹುಮನಾಬಾದ್ :

ಬೀದರ್ ಕಡೆಯಿಂದ ಮಹಾರಾಷ್ಟ್ರದ ಸೋಲಾಪುರ ಕಡೆಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಮನಾಬಾದ್ ಪೊಲೀಸರು ದಾಳಿ ನಡೆಸಿ 34 ಲಕ್ಷ ಮೌಲ್ಯದ 342 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಒಂದು ಕಾರಿನಲ್ಲಿ ನಾಲ್ಕು ಜನರು ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಕಾರನ್ನು ಅಡ್ಡಾಡಿಸಿಕೊಂಡು ಸಿನಿಮಿಯ ರೀತಿಯಲ್ಲಿ ಪೊಲೀಸರು ಕಾರ್ಯಚರಣೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ದುಬಲಗುಂಡಿ ಕ್ರಾಸ್ ಹತ್ತಿರ ರವಿವಾರ ದಾಳಿ ನಡೆದಿದ್ದು, ಈ ಸಂದರ್ಭದಲ್ಲಿ ಮೂರು ಜನ ಆರೋಪಿಗಳು ಪರಾರಿಯಾಗಿದ್ದಾರೆ. ಒಬ್ಬ ಆರೋಪಿ 6 ಲಕ್ಷದ ಕಾರು ಹಾಗೂ ಕಾರಿನಲ್ಲಿದ್ದ 343 ಕೆಜಿ ಗಾಂಜಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಎಸ್.ಪಿ ಡೆಕ್ಕಾ ಕಿಶೋರ ಬಾಬು, ಡಿವೈಎಸ್ಪಿ ಸೋಮಲಿಂಗ ಕುಂಬಾರ ಮಾರ್ಗದರ್ಶನದಲ್ಲಿ ಸಿಪಿಐ ಮಲ್ಲಿಕಾರ್ಜುನ ಯಾತನೂರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಹ್ಮದ್ ಗೌಸ್, ಭಗವಾನ, ದೀಪಕ, ರಮೇಶ, ಶಿವಾನಂದ, ಪಾಂಡುರಂಗ, ಮಲ್ಲಪ್ಪಾ, ಸಂಜೀವ, ಸಂತೋಷ,ಸಂಗಮೇಶ, ಅಂಬಣ್ಣಾ, ಸೂರ್ಯಕಾಂತ,ಬಾಲಾಜಿ ಕಾರ್ಯಾಚರಣೆಯಲ್ಲಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!