ಹೊಸ ದಿಗಂತ ಡಿಜಿಟಲ್ ಡೆಸ್ಕ್
ಸಾಲ ವಂಚನೆ ಪ್ರಕರಣದಲ್ಲಿ ನಿನ್ನೆ ಬಂಧನವಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ಮೂರು ದಿನಗಳ ಕಾಲ ಕೇಂದ್ರೀಯ ತನಿಖಾ ದಳ (CBI) ಕಸ್ಟಡಿಗೆ ನೀಡಿದೆ.
2012ರಲ್ಲಿ ಐಸಿಐಸಿಐ ಬ್ಯಾಂಕ್-ವೀಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಸಿಬಿಐ ಐಸಿಐಸಿಐ ಬ್ಯಾಂಕ್ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚಾರ್ ಮತ್ತು ದೀಪಕ್ ಕೊಚ್ಚಾರ್ ಅವರನ್ನು ನಿನ್ನೆ ಬಂಧಿಸಿದ್ದು, ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಮೂರು ದಿನಗಳ ಕಾಲ ಕಸ್ಟಡಿಗೆ ನೀಡಿದೆ.