Thursday, August 11, 2022

Latest Posts

ಸ್ಥಳೀಯ ಬಿಜೆಪಿ ನಾಯಕರು, ಕಾಯ೯ಕತ೯ರಿಂದ ಪಾಲಿಕೆಯಲ್ಲಿ ಇತಿಹಾಸ ದಾಖಲೆ: ಇಂಧನ ಸಚಿವ ಸುನೀಲ್ ಕುಮಾರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಕಲಬುರಗಿ:

ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಹುರುಪಿನ ಹೋರಾಟ ಮಾಡಿ ಮೇಲುಗೈ ಸಾಧಿಸಿದಂತೆ, ಮುಂಬರುವ ಪಂಚಾಯಿತಿ ಚುನಾವಣೆಗಳಲ್ಲೂ ಇದೇ ಒಗ್ಗಟ್ಟಿನಿಂದ ಮೈಲುಗೈ ಸಾಧಿಸುವಂತಾಗಬೇಕು ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ವಿ. ಸುನೀಲಕುಮಾರ ಆಶಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪಕ್ಷದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಪಾಲಿಕೆ ಚುನಾವಣೆಯಲ್ಲಿ ಭಾರಿ ಒಗ್ಗಟ್ಟಿನಿಂದ ಮತದಾರರ ಮನವೊಲಿಸುವಲ್ಲಿ ಶಾಸಕರು, ಎಂಎಲ್‌ಸಿಗಳು ಸೇರಿದಂತೆ ಎಲ್ಲ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರು ಶ್ರಮ ಪಟ್ಟಿರುವುದರಿಂದಾಗಿ ಪಾಲಿಕೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಲಾಗಿದೆ. ಅಲ್ಲದೆ, ಅಧಿಕಾರವೂ ಹಿಡಿಯಲಿದ್ದೇವೆ ಎಂದರು.
ಇದೇ ಒಗ್ಗಟ್ಟು ಮತ್ತು ಹುರುಪಿನಿಂದ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬೇಕಾದ ಎಲ್ಲ ತಂತ್ರಗಳನ್ನು, ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆಯಲ್ಲಿ ಶಾಸಕ ಬಸವರಾಜ ಮತ್ತಿಮೂಡ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ್, ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್, ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ, ಮುಖಂಡರಾದ ಪ್ರಲ್ಹಾದ ಭಟ್ ಪೂಜಾರಿ, ಪರಶುರಾಮ ನಸಲವಾಯಿ ಇತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss