August 2, 2026
Sunday, August 2, 2026
spot_img

ವಿಜಯನಗರದ ಎಚ್‌ಬಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಲಾಕ್ ಅಪ್ ಡೆತ್? ಸ್ಥಳದಲ್ಲಿ ಸಾರ್ವಜನಿಕರ ಆಕ್ರೋಶ

ಹೊಸದಿಗಂತ ವರದಿ ವಿಜಯನಗರ

ವಿಜಯನಗರ: ಕೌಟುಂಬಿಕ ಕಹಲದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಠಾಣೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ.

ಮೃತನನ್ನು ಹರಪನಹಳ್ಳಿ ನಿವಾಸಿ ಖಲೀಲ್(38) ಎಂದು ಗುರುತಿಸಲಾಗಿದೆ. ಈತ ಹಗರಿಬೊಮ್ಮನಹಳ್ಳಿಯಲ್ಲಿರುವ ಪತ್ನಿ ಮನೆಗೆ ಬಂದಿದ್ದು, ಶನಿವಾರ ರಾತ್ರಿ ತನ್ನ ಹೆಂಡತಿಯೊಂದಿಗೆ ಜಗಳ ಕಾದಿದ್ದ. ಈ ಕುರಿತು ಪತ್ನಿ 112ಕ್ಕೆ ಕರೆ ಮಾಡಿ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಪೊಲೀಸರು ಖಲೀಲ್‌ನನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆನಂತರ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ:

ಖಲೀಲ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಭಾನುವಾರ ಬೆಳಗ್ಗೆಯೇ ಕುಟುಂಬಸ್ಥರು ಹಾಗೂ ಸಂಬಂಧಿಕರು ಭಾರೀ ಸಂಖ್ಯೆಯಲ್ಲಿ ಆಸ್ಪತ್ರೆ ಎದುರು ಜಮಾಹಿಸಿದ್ದಾರೆ. ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆ ಹಾಗೂ ಪೊಲೀಸ್ ಠಾಣೆಯ ಸುತ್ತಮುತ್ತ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಸ್ಥಳದಲ್ಲೇ ಮುಕ್ಕಾಂ ಹೂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !