Monday, August 8, 2022

Latest Posts

ಮೇ 15ರವರೆಗೆ ಲಾಕ್​ಡೌನ್​: ಬಿಹಾರ ಸರಕಾರ ಘೋಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಈಗಾಗಲೇ ಲಾಕ್​ಡೌನ್​ ಜಾರಿಯಲ್ಲಿದ್ದು, ಇದೀಗ ಬಿಹಾರದಲ್ಲಿಯೂ ಲಾಕ್​ಡೌನ್​ ಮಾಡುವುದಾಗಿ ಸರ್ಕಾರ ಘೋಷಿಸಿದೆ.
ಸಂಪುಟ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ರಾಜ್ಯದಲ್ಲಿ ಮೇ 15ರವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರದಂದು ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಮಾರ್ಗಸೂಚಿ ತಯಾರಿಸಲಾಗುತ್ತಿದ್ದು, ಶೀಘ್ರವೇ ಅದನ್ನು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss