Thursday, July 7, 2022

Latest Posts

ಪಶ್ಚಿಮಬಂಗಾಳದಲ್ಲಿ ಜುಲೈ 1ರವರೆಗೆ ಲಾಕ್ ಡೌನ್ ವಿಸ್ತರಣೆ: ಮಮತಾ ಬ್ಯಾನರ್ಜಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜುಲೈ 1ರವರೆಗೆ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದು, ಈ ಸಂದರ್ಭದಲ್ಲಿ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ನೂತನ ಮಾರ್ಗಸೂಚಿ ಪ್ರಕಾರ, ಜೂನ್ 16ರಿಂದ ಎಲ್ಲಾ ಸರ್ಕಾರಿ ಕಚೇರಿಗಳು ಶೇ.25ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಆಯಾ ಇಲಾಖೆಯ ಮುಖ್ಯಸ್ಥರು ಕೆಲಸದ ಸಮಯದ ಹಂಚಿಕೆ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ. ಸಂಚಾರಕ್ಕೆ ಇ-ಪಾಸ್ ಅಗತ್ಯವಿದೆ ಎಂದು ವಿವರಿಸಿದೆ. ಪಾರ್ಕ್ ಗಳು ಬೆಳಗ್ಗೆ 6ಗಂಟೆಯಿಂದ 9ಗಂಟೆವರೆಗೆ ತೆರೆಯಲಾಗುವುದು.ಕೋವಿಡ್ 19 ಲಸಿಕೆಯನ್ನು ತೆಗೆದುಕೊಂಡಿದ್ದಾರೋ ಅಂತಹ ವ್ಯಕ್ತಿಗಳಿಗೆ ಮಾತ್ರ ಪಾರ್ಕ್ ಒಳಗೆ ಹೋಗಲು ಅನುಮತಿ ನೀಡಲಾಗುವುದು ಎಂದು ವರದಿ ವಿವರಿಸಿದೆ.
ಎಲ್ಲಾ ಮಾರುಕಟ್ಟೆ, ಬಜಾರ್ ಗಳು ಬೆಳಗ್ಗೆ 7ಗಂಟೆಯಿಂದ 11ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಇನ್ನಿತರ ಸಣ್ಣ ಅಂಗಡಿಗಳು 11ರಿಂದ ಸಂಜೆ 6ಗಂಟೆವರೆಗೆ ತೆರೆಯಲು ಅವಕಾಶ ನೀಡಲಾಗಿದೆ ಎಂದು ವರದಿ ತಿಳಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss