ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………….
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ಹಿನ್ನೆಲೆ ಮತ್ತೆ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂಬ ವದಂತಿ ಹರಿದಾಡುತ್ತಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿಯವರು ಲಾಕ್ ಡೌನ್ ಮಾಡಿ ಅಂದ್ರೆ ರಾಜ್ಯದಲ್ಲಿ ಲಾಕ್ ಡೌನ್ ಮಾಡಲಾಗುವುದು ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಪ್ರಧಾನಿ ಸುಪ್ರೀಂ ಕೋರ್ಟ್ ಸೂಚನೆ ವಿಚಾರವಾಗಿ ಕ್ಯಾಬಿನೆಟ್ ಸಭೆ ನಡೆಸುತ್ತಿದ್ದಾರೆ. ಸಭೆಯ ಬಳಿಕ ರಾಜ್ಯದಲ್ಲಿ ಏನು ಕ್ರಮ ಕೈಗೊಳ್ಳಬೇಕು ಅಂತ ನಿರ್ಧರಿಸುತ್ತೇವೆ. ಪ್ರಧಾನಿ ಮೋದಿ ಅವರು ಏನು ಸೂಚನೆ ನೀಡುತ್ತಾರೆ ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿ.
ಸಂಜೆಯ ವೇಳೆ ಪ್ರಧಾನಿ ನಿರ್ಧಾರ ಪ್ರಕಟವಾಗಲಿದೆ. ಅವರು ಲಾಕ್ ಡೌನ್ ಜಾರಿ ಮಾಡುವಂತೆ ಸಲಹೆ ನೀಡಿದರೆ ರಾಜ್ಯದಲ್ಲಿಯೂ ಮತ್ತೆ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.