Wednesday, June 29, 2022

Latest Posts

ಮುಂದಿನ ವಾರದಿಂದ ಲಾಕ್‌ಡೌನ್ ಸಡಿಲ: ಸಚಿವ ಆರ್. ಅಶೋಕ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಮುಂದಿನ ವಾರದಿಂದ ನಾಲ್ಕರಿಂದ ಐದು ಹಂತಗಳಲ್ಲಿ ನಿರ್ಬಂಧಗಳನ್ನು ಸಡಿಲಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ಮೊದಲನೆಯದಾಗಿ ಅಗತ್ಯ ವಸ್ತುಗಳ ಖರೀದಿಗೆ ನಿಗದಿಪಡಿಸಿದ ಸಮಯವನ್ನು 12 ಗಂಟೆಯವರೆಗೆ ವಿಸ್ತರಿಸಲಾಗುತ್ತದೆ. ವ್ಯಾಯಾಮ ಮತ್ತು ವಾಯುವಿಹಾರಕ್ಕಾಗಿ ಉದ್ಯಾನಗಳಿಗೆ ಭೇಟಿ ನೀಡಲು ಅವಕಾಶ ನೀಡುವ ಬಗ್ಗೆ ಕೂಡ ಸರ್ಕಾರದ ಮಟ್ಟದಲ್ಲಿ ಚಿಂತನೆಗಳು ನಡೆಯುತ್ತಿವೆ. ಹಂತ ಹಂತವಾಗಿ ನಿರ್ಬಂಧಗಳನ್ನು ತೆರವುಗೊಳಿಸಲಾಗುತ್ತದೆ. ಒಮ್ಮೆಲೆಯೇ ತೆರವುಗೊಳಿಸಿದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣುವ ಅಪಾಯ ಇರಲಿದೆ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನ್‌ಲಾಕ್ ಪ್ರಕ್ರಿಯೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಬೆಂಗಳೂರಿನಲ್ಲಿ ಸದ್ಯ 2ಸಾವಿರ ಪ್ರಕರಣಗಳು ವರದಿಯಾಗುತ್ತಿವೆ. ಜನಜೀವನವು ಸಾಮಾನ್ಯ ಸ್ಥಿತಿಗೆ ಬರಬೇಕಾದರೇ ಪ್ರಕರಣಗಳ ಸಂಖ್ಯೆ 500ಕ್ಕೆ ಇಳಿಕೆಯಾಗಬೇಕು.ಆದ್ದರಿಂದ ಅನ್‌ಲಾಕ್ ಪ್ರಕ್ರಿಯೆ ಪ್ರಾರಂಭಿಸಿದ ಬಳಿಕ ಸೋಂಕು ದೃಢ ಪ್ರಮಾಣವನ್ನು ವಿಶ್ಲೇಷಿಸಿ, ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ವಿವರಿಸಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss