Tuesday, June 28, 2022

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಕಠಿಣವಾಗಲಿದೆ ಲಾಕ್‌ಡೌನ್ ನಿಯಮ: ಜಿಲ್ಲಾಧಿಕಾರಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಇಳಿಕೆಯಾಗದಿರುವುದರಿಂದ ಜೂ.8 ರಿಂದ ಲಾಕ್‌ಡೌನ್ ನಿಯಮಗಳು ಮತ್ತಷ್ಟು ಕಠಿಣವಾಗಲಿವೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜನತೆ ಅನಗತ್ಯವಾಗಿ ತಿರುಗಾಡುತ್ತಿರುವುದು ಹೆಚ್ಚಾಗಿದೆ. ಆದ್ದರಿಂದ ಕಠಿಣ ನಿಯಮ ಅನುಷ್ಠಾನ ಅನಿವಾರ್ಯ. ವಿನಾಕಾರಣ ಓಡಾಡುವವರ ಮೇಲೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಆದ್ದರಿಂದ ಜನತೆ ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಪಾಸಿಟಿವಿಟಿ ದರ ಶೇ.20ರಿಂದ 21ರಷ್ಟಿದೆ. ಇದನ್ನು ಶೇ.5ಕ್ಕೆ ಇಳಿಸಿ ಅನ್‌ಲಾಕ್‌ಗೊಳಿಸುವಲ್ಲಿ ಜನರ ಸಹಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸರಕಾರದ ಆದೇಶದಂತೆ ಜೂ.14ರವರೆಗೂ ಪ್ರಸ್ತುತ ಜಾರಿಯಲ್ಲಿರುವ ಲಾಕ್‌ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿಜಾರಿಗೊಳಿಸುವುದು ಅನಿವಾರ್ಯವಾಗಿದೆ. ದ.ಕ. ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಗ್ರಾಪಂಗಳಲ್ಲಿ ಪೂರ್ವ ನಿಗದಿತ ಮದುವೆ ಹಾಗೂ ಇತರ ಕಾರ್ಯಕ್ರಮಗಳನ್ನು ರದ್ದು ಮಾಡುವುದು ಹಾಗೂ ಹೊಸ ಕಾರ್ಯಕ್ರಮಗಳಿಗೆ ಅನುಮತಿ ನೀಡದಿರುವ ಮೂಲಕ ವಿಶೇಷ ಲಾಕ್‌ಡೌನ್ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ನಗರದಲ್ಲಿ 10ತಂಡ ರಚನೆ
ಪೂರ್ವಾಹ್ನ10 ಗಂಟೆಯ ಬಳಿಕ ಅಗತ್ಯ ವಸ್ತುಗಳ ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯಾಪಾರ ಮಾಡುವುದು, ಕೋವಿಡ್ ನಿಯಮ ಪಾಲನೆ ಮಾಡದಿರುವ ಕುರಿತು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಯ 10 ವಿಚಕ್ಷಣ ದಳಗಳು ಕಾರ್ಯ ನಿರ್ವಹಿಸಲಿವೆ. ಗ್ರಾಮಾಂತರದಲ್ಲಿ ತಾಲೂಕು ಮಟ್ಟದಲ್ಲಿ 2 ರಿಂದ 3 ರಷ್ಟು ವಿಚಕ್ಷಣ ತಂಡಗಳು ಕಾರ್ಯ ನಿರ್ವಹಿಸಲಿವೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss