ಬೆಂಗಳೂರು ಚಲನಚಿತ್ರೋತ್ಸವದ ಲೋಗೋ ಬಿಡುಗಡೆ ಮಾಡಿದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್

13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಚಲನಚಿತ್ರೋತ್ಸವದ ಲೋಗೋ ಬಿಡುಗಡೆ ಮಾಡಿದರು.

ತೋಟಗಾರಿಕಾ ಸಚಿವ ಮುನಿರತ್ನ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಂ, ಸಂಘಟನಾ ಸಮಿತಿ ಸದಸ್ಯರಾದ ಖ್ಯಾತ ಕಲಾವಿದೆ ಸುಧಾರಾಣಿ, ಕಲಾ ನಿರ್ದೇಶಕ ಶಶಿಧರ್ ಅಡಪ, ಕಲಾವಿದೆ ಸೋನುಗೌಡ, ಕಲಾ ನಿರ್ದೇಶಕ ಎಚ್.ಎನ್. ನರಹರಿ ರಾವ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಆಯುಕ್ತ ಪಿ.ಎಸ್. ಹರ್ಷ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!