ಲೋಕಸಭೆ ಸ್ಪರ್ಧೆ ಖಚಿತ: ಯಡಿಯೂರಪ್ಪ ಅವರನ್ನು ಭೇಟಿಯಾದ ಡಾ.ಮಂಜುನಾಥ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬಳಿಕ ಮಧ್ಯಮಗಳ ಜೊತೆ ಮಾತನಾಡಿದ ಅವರು, ಮೋದಿ ಸರ್ಕಾರ (PM Narendra Modi Government) ಸಾಧಕರಿಗೆ, ಪರಿಣಿತರಿಗೆ ಪ್ರೊತ್ಸಾಹ ಕೊಡುತ್ತಿದ್ದಾರೆ. ಹೀಗಾಗಿ ನಾನು ಲೋಕಸಭೆ ಚುನಾವಣೆ ಎದುರಿಸುತ್ತಿದ್ದೇನೆ. ಅಧಿಕೃತವಾಗಿ 2-3 ದಿನಗಳಲ್ಲಿ ನಾನು ರಾಜಕೀಯಕ್ಕೆ ಸೇರ್ಪಡೆ ಆಗುತ್ತೇನೆ ಎಂದು ಹೇಳಿದ್ದಾರೆ.

ಹೃದ್ರೋಗ ಕ್ಷೇತ್ರದಲ್ಲಿ ಕಾಂತ್ರಿಕಾರಕ ಕೆಲಸ ಮಾಡಿದ್ದೇವೆ. ಮೋದಿ ಅವರಿಗೆ ಹ್ರಾಟ್ರಿಕ್ ಎಲೆಕ್ಷನ್ ನಡೆಯುತ್ತಿದೆ. ಅವರ ನಾಯಕತ್ವದಲ್ಲಿ ದೇಶಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಯಡಿಯೂರಪ್ಪ ಅವರ ಜೊತೆ ಮಾತಾಡಿದ್ದೇನೆ. ರಾಜಕೀಯದಲ್ಲೂ ನಾನು ರಾಜಕೀಯ ಮಾಡುವುದಿಲ್ಲ ಎಂದು ತಿಳಿಸಿದರು.

ರಾಜಕಾರಣ ಎಂದಾಕ್ಷಣ ಎಲ್ಲ ಮಾತುಗಳು ಕೇಳಿಬರುತ್ತವೆ. ಜನರಿಗೆ ನನ್ನ ಬಗ್ಗೆ ಗೊತ್ತಿದೆ. ಆರೋಗ್ಯ ಕ್ಷೇತ್ರ ಬಹಳ ದೊಡ್ಡ ಕ್ಷೇತ್ರವಾಗಿದ್ದು, ಇಲ್ಲಿ ಸಾಧಿಸಿದ ಯಶಸ್ಸನ್ನು ರಾಜಕಾರಣದಲ್ಲೂ ಸಾಧಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರು ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ ನಾಯಕತ್ವದಲ್ಲಿ ರಾಜರಾರಣದಲ್ಲಿ ಬರುವುದೆಲ್ಲವನ್ನು ಸ್ವೀಕರಿಸಲು ಸಿದ್ಧವಾಗಿದ್ದೇನೆ ಎಂದು ಹೇಳಿದರು.

ನಾಳೆಯೇ ಬಿಜೆಪಿ ಸೇರ್ಪಡೆಯಾಗುವ ಕಾರ್ಯಕ್ರಮ ನಿಗದಿಯಾಗಿಲ್ಲ. ಆದರೆ, ಎಲ್ಲ ನಾಯಕರ ಲಭ್ಯತೆಯನ್ನು ನೋಡಿಕೊಂಡು ದಿನಾಂಕ ನಿಗದಿ ಮಾಡಿಕೊಂಡು ಪಕ್ಷ ಸೇರ್ಪಡೆ ಆಗುತ್ತೇನೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಕೆಲ ಮಾರ್ಗದರ್ಶನಗಳನ್ನೂ ಪಡೆದುಕೊಳ್ಳುತ್ತೇನೆ ಎಂದು ಡಾ.ಮಂಜುನಾಥ್ ತಿಳಿಸಿದರು.

ಯಡಿಯೂರಪ್ಪ ಮಾತನಾಡಿ, ಇಡೀ ನಾಡಿಗೆ ಗೊತ್ತಿರುವಂತೆ ಡಾ ಮಂಜುನಾಥ್ ಲಕ್ಷಾಂತರ ಜನರ ಪ್ರಾಣ ಉಳಿಸಿದ್ಧಾರೆ. ಅವರು ಬಿಜೆಪಿ ಸೇರ್ಪಡೆ ಆಗಲಿದ್ದು, ಇಂತಹವರನ್ನ ಅವಿರೋಧವಾಗಿ ಗೆಲ್ಲಿಸಿಕೊಡಬೇಕಿತ್ತು. ಆದರೆ ಚುನಾವಣಾ ರಾಜಕೀಯ ಅನಿವಾರ್ಯ. ಅವರ ಪಕ್ಷ ಸೇರ್ಪಡೆ ಬಗ್ಗೆ ಮೋದಿ ಅವರಿಗೂ ಮಾಹಿತಿ ನೀಡಿದ್ದೆವು. ಅವರು ಕೂಡ ಬಹಳ ಸಂತೋಷಪಟ್ಟರು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!