ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಫಲಿತಾಂಶ 2024ರ ಮತ ಎಣಿಕೆ ಆರಂಭವಾಗಿದೆ. ಅಂಚೆ ಮತಪತ್ರಗಳ ಎಣಿಕೆಯೊಂದಿಗೆ ಪ್ರಕ್ರಿಯೆಯು ಪ್ರಾರಂಭವಾಗುತ್ತದೆ ಮತ್ತು ಅಂತಿಮ ಲೆಕ್ಕಾಚಾರಗಳು ಸಿದ್ಧವಾಗುವವರೆಗೆ ಮುಂದುವರಿಯುತ್ತದೆ ಎಂದು ಮಾಹಿತಿ ಲಭ್ಯವಾಗಿದೆ.
ದೇಶದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, 543 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಪ್ರಕಟವಾಗಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತದಲ್ಲಿ ಮತದಾನ ನಡೆದಿತ್ತು. ರಾಜ್ಯದ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ 474 ಅಭ್ಯರ್ಥಿಗಳ ಭವಿಷ್ಯ ಪ್ರಕಟವಾಗಲಿದೆ.