ಲೋಕಸಭಾ ಚುನಾವಣೆ ಅಲರ್ಟ್: ಬೆಂಗಳೂರಲ್ಲಿ ನಾಳೆಯಿಂದಲೇ ನಿಷೇಧಾಜ್ಞೆ ಜಾರಿ, ಮದ್ಯ ಮಾರಾಟವೂ ಬಂದ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಲೋಕಸಭಾ ಚುನಾವಣೆ ಭಾಗವಾಗಿ ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ (Lok Sabha Election 2024) ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಏ.24ರ ಸಂಜೆ 6 ಗಂಟೆಯಿಂದ ಏ.26ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಮದ್ಯ ಮಾರಾಟಕ್ಕೂ ನಿಷೇಧ ವಿಧಿಸಲಾಗಿದೆ.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

ಬುಧವಾರ ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜತೆಗೆ 5 ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ. ನಿಷೇಧಾಜ್ಞೆಯು ಏಪ್ರಿಲ್ 26ರ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರಿನ 5 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 13 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 11 ಸಿಆರ್‌ಪಿಎಫ್, 14 ಕೆಎಸ್‌ಆರ್‌ಪಿ ಹಾಗೂ 40 ಸಿಎಆರ್ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!